Job · chapter 17 · verse 14
Job 17:14 in Kannada
ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
Koleyuvikege -- neenu nanna tande endoo hulakke--nanna taayiye, nanna akkane endoo naanu helidenu.
Job 17:14 in English
- King James Version (KJV)
- I have said to corruption, Thou [art] my father: to the worm, [Thou art] my mother, and my sister.
- World English Bible (WEB)
- if I have said to corruption, ‘You are my father,’ and to the worm, ‘My mother,’ and ‘My sister,’
- American Standard Version (ASV)
- If I have said to corruption, Thou art my father; To the worm, [Thou art] my mother, and my sister;
- Bible in Basic English (BBE)
- If I say to the earth, You are my father; and to the worm, My mother and my sister;
- Darby Translation (DBY)
- I cry to the grave, Thou art my father! to the worm, My mother, and my sister!
- Webster's Bible (WBS)
- I have said to corruption, Thou [art] my father: to the worm, [Thou art] my mother, and my sister.
- Young's Literal Translation (YLT)
- To corruption I have called: — 'Thou [art] my father.' 'My mother' and 'my sister' — to the worm.
Read in context
- 12ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
- 13ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
- 14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- 15ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- 16ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
Cross references
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Job 21:32–33 ಯೋಬನು 21:32–33ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- 1 Corinthians 15:42 1 ಕೊರಿಂಥದವರಿಗೆ 15:42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- Isaiah 14:11 ಯೆಶಾಯ 14:11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- Job 30:30 ಯೋಬನು 30:30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Job 24:20 ಯೋಬನು 24:20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Job 21:26 ಯೋಬನು 21:26ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
- Acts 2:27–31 ಅಪೊಸ್ತಲರ ಕೃತ್ಯಗಳು 2:27–31ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Psalm 49:9 ಕೀರ್ತನೆಗಳು 49:9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- 1 Corinthians 15:53–54 1 ಕೊರಿಂಥದವರಿಗೆ 15:53–54ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- Acts 13:34–37 ಅಪೊಸ್ತಲರ ಕೃತ್ಯಗಳು 13:34–37ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.