Job · chapter 19 · verse 10
Job 19:10 in Kannada
ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
Suttaloo nannannu naasha padisiddarinda naanu hoguttene; maravannu keeluva haage nanna nireeksheyannu kittubittanu.
Job 19:10 in English
- King James Version (KJV)
- He hath destroyed me on every side, and I am gone: and mine hope hath he removed like a tree.
- World English Bible (WEB)
- He has broken me down on every side, and I am gone. He has plucked my hope up like a tree.
- American Standard Version (ASV)
- He hath broken me down on every side, and I am gone; And my hope hath he plucked up like a tree.
- Bible in Basic English (BBE)
- I am broken down by him on every side, and I am gone; my hope is uprooted like a tree.
- Darby Translation (DBY)
- He breaketh me down on every side, and I am gone; and my hope hath he torn up as a tree.
- Webster's Bible (WBS)
- He hath destroyed me on every side, and I am gone: and my hope hath he removed like a tree.
- Young's Literal Translation (YLT)
- He breaketh me down round about, and I go, And removeth like a tree my hope.
Read in context
- 8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
- 9ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
- 10ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
- 11ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
- 12ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
Cross references
- Job 24:20 ಯೋಬನು 24:20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- Job 1:13–19 ಯೋಬನು 1:13–19ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 6:11 ಯೋಬನು 6:11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Psalm 102:11 ಕೀರ್ತನೆಗಳು 102:11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- Job 8:13–18 ಯೋಬನು 8:13–18ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು. ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ. ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು. ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು. ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ. ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
- Lamentations 2:5–6 ಪ್ರಲಾಪಗಳು 2:5–6ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ. ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ.
- Job 17:11 ಯೋಬನು 17:11ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
- Job 17:15 ಯೋಬನು 17:15ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.