Job · chapter 19 · verse 14
Job 19:14 in Kannada
ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.
Nanna nereyavaru tadeyuttaare; nanna parichayada snehitaru nannannu marettiddaare.
Job 19:14 in English
- King James Version (KJV)
- My kinsfolk have failed, and my familiar friends have forgotten me.
- World English Bible (WEB)
- My relatives have gone away. My familiar friends have forgotten me.
- American Standard Version (ASV)
- My kinsfolk have failed, And my familiar friends have forgotten me.
- Bible in Basic English (BBE)
- My relations and my near friends have given me up, and those living in my house have put me out of their minds.
- Darby Translation (DBY)
- My kinsfolk have failed, and my known friends have forgotten me.
- Webster's Bible (WBS)
- My kinsmen have failed, and my familiar friends have forgotten me.
- Young's Literal Translation (YLT)
- Ceased have my neighbours And my familiar friends have forgotten me,
Read in context
- 12ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
- 13ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
- 14ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.
- 15ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
- 16ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
Cross references
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Psalm 55:12–14 ಕೀರ್ತನೆಗಳು 55:12–14ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ. ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 2 Samuel 16:23 2 ಸಮುವೇಲನು 16:23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- Matthew 10:21 ಮತ್ತಾಯನು 10:21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.