Job · chapter 19 · verse 25
Job 19:25 in Kannada
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
Nanna vimochakanu jeevisuttaanendoo aatanu kadeya dinadalli bhoomiya mele nilluvanendoo tilididdene;
Job 19:25 in English
- King James Version (KJV)
- For I know [that] my redeemer liveth, and [that] he shall stand at the latter [day] upon the earth:
- World English Bible (WEB)
- But as for me, I know that my Redeemer lives. In the end, he will stand upon the earth.
- American Standard Version (ASV)
- But as for me I know that my Redeemer liveth, And at last he will stand up upon the earth:
- Bible in Basic English (BBE)
- But I am certain that he who will take up my cause is living, and that in time to come he will take his place on the dust;
- Darby Translation (DBY)
- And [as for] me, I know that my Redeemer liveth, and the Last, he shall stand upon the earth;
- Webster's Bible (WBS)
- For I know [that] my redeemer liveth, and [that] he will stand at the latter [day] upon the earth:
- Young's Literal Translation (YLT)
- That — I have known my Redeemer, The Living and the Last, For the dust he doth rise.
Read in context
- 23ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
- 24ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
- 25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
- 26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- 27ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
Cross references
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Psalm 78:35 ಕೀರ್ತನೆಗಳು 78:35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Proverbs 23:11 ಜ್ಞಾನೋಕ್ತಿಗಳು 23:11ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
- John 5:22–29 ಯೋಹಾನನು 5:22–29ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Isaiah 59:20–21 ಯೆಶಾಯ 59:20–21ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Jeremiah 50:34 ಯೆರೆಮೀಯ 50:34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Isaiah 43:14 ಯೆಶಾಯ 43:14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
- Job 16:19 ಯೋಬನು 16:19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
- Jude 1:14 ಯೂದನು 1:14ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
- Job 33:23–24 ಯೋಬನು 33:23–24ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ, ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.