Job · chapter 20 · verse 13
Job 20:13 in Kannada
ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
Adannu kanikarisi adannu bidade tanna baayiyolage ittukondaroo
Job 20:13 in English
- King James Version (KJV)
- [Though] he spare it, and forsake it not; but keep it still within his mouth:
- World English Bible (WEB)
- though he spare it, and will not let it go, but keep it still within his mouth,
- American Standard Version (ASV)
- Though he spare it, and will not let it go, But keep it still within his mouth;
- Bible in Basic English (BBE)
- Though he takes care of it, and does not let it go, but keeps it still in his mouth;
- Darby Translation (DBY)
- [Though] he spare it, and forsake it not, but keep it within his mouth,
- Webster's Bible (WBS)
- [Though] he may spare it, and forsake it not; but keep it still within his mouth:
- Young's Literal Translation (YLT)
- Hath pity on it, and doth not forsake it, And keep it back in the midst of his palate,
Read in context
- 11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- 12ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
- 13ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
- 14ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
- 15ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
Cross references
- Matthew 5:29–30 ಮತ್ತಾಯನು 5:29–30ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ. ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Numbers 11:18–20 ಅರಣ್ಯಕಾಂಡ 11:18–20ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ. ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Mark 9:43–49 ಮಾರ್ಕನು 9:43–49ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.