Job · chapter 20 · verse 17
Job 20:17 in Kannada
ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
Avanu jenoo benne hariyuva halla galannoo nadiyannoo kaalivegalannoo nodanu.
Job 20:17 in English
- King James Version (KJV)
- He shall not see the rivers, the floods, the brooks of honey and butter.
- World English Bible (WEB)
- He will not look at the rivers, the flowing streams of honey and butter.
- American Standard Version (ASV)
- He shall not look upon the rivers, The flowing streams of honey and butter.
- Bible in Basic English (BBE)
- Let him not see the rivers of oil, the streams of honey and milk.
- Darby Translation (DBY)
- He shall not see streams, rivers, brooks of honey and butter.
- Webster's Bible (WBS)
- He shall not see the river, the floods, the brooks of honey and buttermilk.
- Young's Literal Translation (YLT)
- He looketh not on rivulets, Flowing of brooks of honey and butter.
Read in context
- 15ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
- 16ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
- 17ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
- 18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
- 19ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
Cross references
- Deuteronomy 32:13–14 ಧರ್ಮೋಪದೇಶಕಾಂಡ 32:13–14ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು. ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Job 29:6 ಯೋಬನು 29:6ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- Psalm 36:8–9 ಕೀರ್ತನೆಗಳು 36:8–9ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- Isaiah 7:22 ಯೆಶಾಯ 7:22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
- Psalm 81:16 ಕೀರ್ತನೆಗಳು 81:16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- 2 Samuel 17:29 2 ಸಮುವೇಲನು 17:29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- Isaiah 41:17 ಯೆಶಾಯ 41:17ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
- Isaiah 7:15 ಯೆಶಾಯ 7:15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- Jeremiah 17:6–8 ಯೆರೆಮೀಯ 17:6–8ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.