Job · chapter 21 · verse 19
Job 21:19 in Kannada
ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.
Devaru avana makkalige avana aparaadhavannu iduttaane; avanu tilukolluva haage avanige muyyige muyyi koduttaane.
Job 21:19 in English
- King James Version (KJV)
- God layeth up his iniquity for his children: he rewardeth him, and he shall know [it].
- World English Bible (WEB)
- You say, ‘God lays up his iniquity for his children.’ Let him recompense it to himself, that he may know it.
- American Standard Version (ASV)
- [Ye say], God layeth up his iniquity for his children. Let him recompense it unto himself, that he may know it:
- Bible in Basic English (BBE)
- You say, God keeps punishment stored up for his children. Let him send it on the man himself, so that he may have the punishment of it!
- Darby Translation (DBY)
- God layeth up [the punishment of] his iniquity for his children; he rewardeth him, and he shall know [it]:
- Webster's Bible (WBS)
- God layeth up his iniquity for his children: he rewardeth him, and he shall know [it] .
- Young's Literal Translation (YLT)
- God layeth up for his sons his sorrow, He giveth recompense unto him — and he knoweth.
Read in context
- 17ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
- 18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- 19ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.
- 20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- 21ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
Cross references
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Ezekiel 18:19–20 ಯೆಹೆಜ್ಕೇಲನು 18:19–20ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು. ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- Jeremiah 31:29 ಯೆರೆಮೀಯ 31:29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
- Ezekiel 18:2 ಯೆಹೆಜ್ಕೇಲನು 18:2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- Isaiah 53:4–6 ಯೆಶಾಯ 53:4–6ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Isaiah 14:21 ಯೆಶಾಯ 14:21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- Psalm 54:5 ಕೀರ್ತನೆಗಳು 54:5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- Matthew 23:31–35 ಮತ್ತಾಯನು 23:31–35ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Psalm 109:9–31 ಕೀರ್ತನೆಗಳು 109:9–31ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ. ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು. ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ. ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು. ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ. ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ; ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು. ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ. ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು. ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ. ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ. ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ. ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು. ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
- Deuteronomy 32:34 ಧರ್ಮೋಪದೇಶಕಾಂಡ 32:34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.