Job · chapter 21 · verse 22
Job 21:22 in Kannada
ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
Devarige tiluvalikeyannu kalisuvadunte? Unnatavaadavarige aatane nyaayateerisuttaanallaa!
Job 21:22 in English
- King James Version (KJV)
- Shall [any] teach God knowledge? seeing he judgeth those that are high.
- World English Bible (WEB)
- “Shall any teach God knowledge, since he judges those who are high?
- American Standard Version (ASV)
- Shall any teach God knowledge, Seeing he judgeth those that are high?
- Bible in Basic English (BBE)
- Is anyone able to give teaching to God? for he is the judge of those who are on high.
- Darby Translation (DBY)
- Can any teach God knowledge? And he it is that judgeth those that are high.
- Webster's Bible (WBS)
- Shall [any] teach God knowledge? seeing he judgeth those that are high.
- Young's Literal Translation (YLT)
- To God doth [one] teach knowledge, And He the high doth judge?
Read in context
- 20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- 21ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
- 22ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
- 23ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
- 24ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
Cross references
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- 1 Corinthians 2:16 1 ಕೊರಿಂಥದವರಿಗೆ 2:16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Isaiah 40:13–14 ಯೆಶಾಯ 40:13–14ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- 1 Corinthians 6:3 1 ಕೊರಿಂಥದವರಿಗೆ 6:3ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- Psalm 82:1 ಕೀರ್ತನೆಗಳು 82:1ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
- Isaiah 40:22–23 ಯೆಶಾಯ 40:22–23ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
- Job 15:15 ಯೋಬನು 15:15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
- Revelation 20:1–3 ಪ್ರಕಟನೆ 20:1–3ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Revelation 20:12–15 ಪ್ರಕಟನೆ 20:12–15ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Job 36:22 ಯೋಬನು 36:22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?