Job · chapter 21 · verse 25
Job 21:25 in Kannada
ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
Mattobbanu kahiyaada praanadinda saayuttaane; avanu santoshadalli enoo unnu vadilla.
Job 21:25 in English
- King James Version (KJV)
- And another dieth in the bitterness of his soul, and never eateth with pleasure.
- World English Bible (WEB)
- Another dies in bitterness of soul, and never tastes of good.
- American Standard Version (ASV)
- And another dieth in bitterness of soul, And never tasteth of good.
- Bible in Basic English (BBE)
- And another comes to his end with a bitter soul, without ever tasting good.
- Darby Translation (DBY)
- And another dieth in bitterness of soul, and hath not tasted good:
- Webster's Bible (WBS)
- And another dieth in the bitterness of his soul, and never eateth with pleasure.
- Young's Literal Translation (YLT)
- And this [one] dieth with a bitter soul, And have not eaten with gladness.
Read in context
- 23ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
- 24ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
- 25ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
- 26ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
- 27ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
Cross references
- Ezekiel 4:16–17 ಯೆಹೆಜ್ಕೇಲನು 4:16–17ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Job 7:11 ಯೋಬನು 7:11ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Ecclesiastes 6:2 ಪ್ರಸಂಗಿ 6:2ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
- 2 Samuel 17:8 2 ಸಮುವೇಲನು 17:8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
- Job 3:20 ಯೋಬನು 3:20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- 1 Kings 17:12 1 ಅರಸುಗಳು 17:12ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.
- Job 10:1 ಯೋಬನು 10:1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- Isaiah 38:15–17 ಯೆಶಾಯ 38:15–17ನಾನು ಏನು ಹೇಳಲಿ; ಆತನು ನನಗೆ ಮಾತುಕೊಟ್ಟು ತಾನೇ ಅದನ್ನು ನೆರವೇರಿಸಿ ದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ಮೆಲ್ಲಗೆ ನಡೆಯುವೆನು. ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ. ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- Proverbs 14:10 ಜ್ಞಾನೋಕ್ತಿಗಳು 14:10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
- Ezekiel 12:18 ಯೆಹೆಜ್ಕೇಲನು 12:18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.
- Job 9:18 ಯೋಬನು 9:18ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.