Job · chapter 21 · verse 30
Job 21:30 in Kannada
ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
Aapattina divasakke ketta vanu irisalpattiddaane. Ugrada divasakke horage taralpaduvanu.
Job 21:30 in English
- King James Version (KJV)
- That the wicked is reserved to the day of destruction? they shall be brought forth to the day of wrath.
- World English Bible (WEB)
- that the evil man is reserved to the day of calamity, that they are led out to the day of wrath?
- American Standard Version (ASV)
- That the evil man is reserved to the day of calamity? That they are led forth to the day of wrath?
- Bible in Basic English (BBE)
- How the evil man goes free in the day of trouble, and has salvation in the day of wrath?
- Darby Translation (DBY)
- That the wicked is reserved for the day of calamity? They are led forth to the day of wrath.
- Webster's Bible (WBS)
- That the wicked is reserved to the day of destruction? they will be brought forth to the day of wrath.
- Young's Literal Translation (YLT)
- That to a day of calamity is the wicked spared. To a day of wrath they are brought.
Read in context
- 28ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- 29ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ?
- 30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- 31ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?
- 32ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.
Cross references
- Proverbs 16:4 ಜ್ಞಾನೋಕ್ತಿಗಳು 16:4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
- 2 Peter 2:9–17 2 ಪೇತ್ರನು 2:9–17ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ. ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ. ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ. ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- Job 20:28 ಯೋಬನು 20:28ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- 2 Peter 3:7 2 ಪೇತ್ರನು 3:7ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Psalm 110:5 ಕೀರ್ತನೆಗಳು 110:5ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
- Zephaniah 1:15 ಚೆಫನ್ಯ 1:15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
- Revelation 6:17 ಪ್ರಕಟನೆ 6:17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.