Job · chapter 21 · verse 7
Job 21:7 in Kannada
ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
Dushtaru yaake baduki mudukaraagi haudu, traanadinda balagolluttaare?
Job 21:7 in English
- King James Version (KJV)
- Wherefore do the wicked live, become old, yea, are mighty in power?
- World English Bible (WEB)
- “Why do the wicked live, become old, yes, and grow mighty in power?
- American Standard Version (ASV)
- Wherefore do the wicked live, Become old, yea, wax mighty in power?
- Bible in Basic English (BBE)
- Why is life given to the evil-doers? why do they become old and strong in power?
- Darby Translation (DBY)
- Wherefore do the wicked live, grow old, yea, become mighty in power?
- Webster's Bible (WBS)
- Why do the wicked live, become old, and, are mighty in power?
- Young's Literal Translation (YLT)
- Wherefore do the wicked live? They have become old, Yea, they have been mighty in wealth.
Read in context
- 5ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
- 6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- 7ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
- 8ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.
- 9ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.
Cross references
- Psalm 73:3–12 ಕೀರ್ತನೆಗಳು 73:3–12ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
- Job 12:6 ಯೋಬನು 12:6ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
- Psalm 37:35 ಕೀರ್ತನೆಗಳು 37:35ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
- Jeremiah 12:1–3 ಯೆರೆಮೀಯ 12:1–3ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ. ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
- Psalm 17:10 ಕೀರ್ತನೆಗಳು 17:10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Daniel 4:17 ದಾನಿಯೇಲನು 4:17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
- Revelation 17:2–4 ಪ್ರಕಟನೆ 17:2–4ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- Habakkuk 1:15–16 ಹಬಕ್ಕೂಕ 1:15–16ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ. ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Revelation 13:2–7 ಪ್ರಕಟನೆ 13:2–7ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು. ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.