Job · chapter 22 · verse 16
Job 22:16 in Kannada
ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
Avaru aa kaala dalli kadiyalpattaru; avara astivaaravu pravaaha dalli koredu hoyitu.
Job 22:16 in English
- King James Version (KJV)
- Which were cut down out of time, whose foundation was overflown with a flood:
- World English Bible (WEB)
- who were snatched away before their time, whose foundation was poured out as a stream,
- American Standard Version (ASV)
- Who were snatched away before their time, Whose foundation was poured out as a stream,
- Bible in Basic English (BBE)
- Who were violently taken away before their time, who were overcome by the rush of waters:
- Darby Translation (DBY)
- Who were carried off before the time, whose foundation was overflowed with a flood;
- Webster's Bible (WBS)
- Who were cut down out of time, whose foundation was overflowed with a flood!
- Young's Literal Translation (YLT)
- Who have been cut down unexpectedly, A flood is poured out on their foundation.
Read in context
- 14ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- 15ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
- 16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- 17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- 18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
Cross references
- Job 15:32 ಯೋಬನು 15:32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
- Genesis 7:17–24 ಆದಿಕಾಂಡ 7:17–24ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು. ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು. ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು. ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು. ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು. ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- 1 Peter 3:19–20 1 ಪೇತ್ರನು 3:19–20ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು; ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Matthew 24:37–39 ಮತ್ತಾಯನು 24:37–39ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Genesis 7:11 ಆದಿಕಾಂಡ 7:11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Ecclesiastes 7:17 ಪ್ರಸಂಗಿ 7:17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- Job 14:19 ಯೋಬನು 14:19ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
- Matthew 7:26–27 ಮತ್ತಾಯನು 7:26–27ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Psalm 102:24 ಕೀರ್ತನೆಗಳು 102:24ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.