Job · chapter 22 · verse 30
Job 22:30 in Kannada
ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
Ontiyaada nira paraadhiyannu tappisuvanu; ninna kaigala shuddhatvadinda avanu tappisikolluvanu.
Job 22:30 in English
- King James Version (KJV)
- He shall deliver the island of the innocent: and it is delivered by the pureness of thine hands.
- World English Bible (WEB)
- He will even deliver him who is not innocent. Yes, he will be delivered through the cleanness of your hands.”
- American Standard Version (ASV)
- He will deliver [even] him that is not innocent: Yea, he shall be delivered through the cleanness of thy hands.
- Bible in Basic English (BBE)
- He makes safe the man who is free from sin, and if your hands are clean, salvation will be yours.
- Darby Translation (DBY)
- [Even] him that is not innocent shall he deliver; yea, he shall be delivered by the pureness of thy hands.
- Webster's Bible (WBS)
- He shall deliver the island of the innocent: and it is delivered by the pureness of thy hands.
- Young's Literal Translation (YLT)
- He delivereth the not innocent, Yea, he hath been delivered By the cleanness of thy hands.
Read in context
- 28ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
- 29ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- 30ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
Cross references
- Job 42:7–8 ಯೋಬನು 42:7–8ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ. ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- James 5:15–16 ಯಾಕೋಬನು 5:15–16ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Psalm 18:20 ಕೀರ್ತನೆಗಳು 18:20ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
- Genesis 18:26–32 ಆದಿಕಾಂಡ 18:26–32ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Malachi 1:9 ಮಲಾಕಿಯ 1:9ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
- Matthew 17:19–20 ಮತ್ತಾಯನು 17:19–20ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು. ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- Acts 19:15–16 ಅಪೊಸ್ತಲರ ಕೃತ್ಯಗಳು 19:15–16ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.