Job · chapter 22 · verse 7
Job 22:7 in Kannada
ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
Danidavanige neerannu kudiya kodalilla; hasidavaninda rottiyannu hinde gediddi.
Job 22:7 in English
- King James Version (KJV)
- Thou hast not given water to the weary to drink, and thou hast withholden bread from the hungry.
- World English Bible (WEB)
- You haven’t given water to the weary to drink, and you have withheld bread from the hungry.
- American Standard Version (ASV)
- Thou hast not given water to the weary to drink, And thou hast withholden bread from the hungry.
- Bible in Basic English (BBE)
- You do not give water to the tired traveller, and from him who has no food you keep back bread.
- Darby Translation (DBY)
- Thou hast not given water to the fainting to drink, and thou hast withholden bread from the hungry.
- Webster's Bible (WBS)
- Thou hast not given water to the weary to drink, and thou hast withheld bread from the hungry.
- Young's Literal Translation (YLT)
- Thou causest not the weary to drink water, And from the hungry thou withholdest bread.
Read in context
- 5ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
- 6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- 7ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
- 8ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
- 9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
Cross references
- Job 31:17 ಯೋಬನು 31:17ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Matthew 25:42 ಮತ್ತಾಯನು 25:42ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
- Ezekiel 18:16 ಯೆಹೆಜ್ಕೇಲನು 18:16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
- Ezekiel 18:7 ಯೆಹೆಜ್ಕೇಲನು 18:7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- Romans 12:20 ರೋಮಾಪುರದವರಿಗೆ 12:20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Deuteronomy 15:7–11 ಧರ್ಮೋಪದೇಶಕಾಂಡ 15:7–11ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು. ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Isaiah 58:10 ಯೆಶಾಯ 58:10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.