Job · chapter 22 · verse 8
Job 22:8 in Kannada
ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
Balishthanigaadaro deshavu avanade; gauravada manushyanu adaralli vaasisidanu.
Job 22:8 in English
- King James Version (KJV)
- But [as for] the mighty man, he had the earth; and the honourable man dwelt in it.
- World English Bible (WEB)
- But as for the mighty man, he had the earth. The honorable man, he lived in it.
- American Standard Version (ASV)
- But as for the mighty man, he had the earth; And the honorable man, he dwelt in it.
- Bible in Basic English (BBE)
- For it was the man with power who had the land, and the man with an honoured name who was living in it.
- Darby Translation (DBY)
- But the powerful man, he had the land; and the man of high rank dwelt in it.
- Webster's Bible (WBS)
- But [as for] the mighty man, he had the earth; and the honorable man dwelt in it.
- Young's Literal Translation (YLT)
- As to the man of arm — he hath the earth, And the accepted of face — he dwelleth in it.
Read in context
- 6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- 7ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
- 8ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
- 9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- 10ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
Cross references
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Psalm 12:8 ಕೀರ್ತನೆಗಳು 12:8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
- Job 31:34 ಯೋಬನು 31:34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
- Isaiah 3:3 ಯೆಶಾಯ 3:3ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
- 1 Kings 21:11–15 1 ಅರಸುಗಳು 21:11–15ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು. ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
- Job 13:8 ಯೋಬನು 13:8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
- Job 29:7–17 ಯೋಬನು 29:7–17ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.