Job · chapter 23 · verse 4
Job 23:4 in Kannada
ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
Nyaayavannu aatana munde siddhamaaduvenu; nanna baayannu prativaadagalinda tumbisuvenu.
Job 23:4 in English
- King James Version (KJV)
- I would order [my] cause before him, and fill my mouth with arguments.
- World English Bible (WEB)
- I would set my cause in order before him, and fill my mouth with arguments.
- American Standard Version (ASV)
- I would set my cause in order before him, And fill my mouth with arguments.
- Bible in Basic English (BBE)
- I would put my cause in order before him, and my mouth would be full of arguments.
- Darby Translation (DBY)
- I would order the cause before him, and fill my mouth with arguments;
- Webster's Bible (WBS)
- I would order [my] cause before him, and fill my mouth with arguments.
- Young's Literal Translation (YLT)
- I arrange before Him the cause, And my mouth fill [with] arguments.
Read in context
- 2ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
- 3ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
- 4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- 5ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
- 6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
Cross references
- Job 13:18 ಯೋಬನು 13:18ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.
- Daniel 9:18–19 ದಾನಿಯೇಲನು 9:18–19ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Numbers 14:13–19 ಅರಣ್ಯಕಾಂಡ 14:13–19ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ! ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ. ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು-- ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು. ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
- Isaiah 43:26 ಯೆಶಾಯ 43:26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- Joshua 7:8–9 ಯೆಹೋಶುವ 7:8–9ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- Genesis 32:12 ಆದಿಕಾಂಡ 32:12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Exodus 32:12–13 ವಿಮೋಚನಕಾಂಡ 32:12–13ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- Job 37:19 ಯೋಬನು 37:19ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.
- Genesis 18:25–32 ಆದಿಕಾಂಡ 18:25–32ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು. ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು. ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು. ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;