Job · chapter 24 · verse 12
Job 24:12 in Kannada
ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
Pattanadolaginda manushyaru naraluttaare; gaayapattavara praanavu kooguttade; aadaroo devaru tappuhorisuvadilla.
Job 24:12 in English
- King James Version (KJV)
- Men groan from out of the city, and the soul of the wounded crieth out: yet God layeth not folly [to them].
- World English Bible (WEB)
- From out of the populous city, men groan. The soul of the wounded cries out, yet God doesn’t regard the folly.
- American Standard Version (ASV)
- From out of the populous city men groan, And the soul of the wounded crieth out: Yet God regardeth not the folly.
- Bible in Basic English (BBE)
- From the town come sounds of pain from those who are near death, and the soul of the wounded is crying out for help; but God does not take note of their prayer.
- Darby Translation (DBY)
- Men groan from out of the city, and the soul of the wounded crieth out; and God imputeth not the impiety.
- Webster's Bible (WBS)
- Men groan from out of the city, and the soul of the wounded crieth out: yet God layeth not folly [to them] .
- Young's Literal Translation (YLT)
- Because of enmity men do groan, And the soul of pierced ones doth cry, And God doth not give praise.
Read in context
- 10ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
- 11ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
- 12ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
- 13ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
- 14ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
Cross references
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Ecclesiastes 8:11–12 ಪ್ರಸಂಗಿ 8:11–12ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು. ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- Psalm 69:26 ಕೀರ್ತನೆಗಳು 69:26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- Exodus 22:27 ವಿಮೋಚನಕಾಂಡ 22:27ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Exodus 1:13–14 ವಿಮೋಚನಕಾಂಡ 1:13–14ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Job 9:23 ಯೋಬನು 9:23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.