Job · chapter 24 · verse 23
Job 24:23 in Kannada
ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
Avanannu bhadrapadisuttaane; avanu vishraanti tegedukolluttaane; aadaagyoo aatana kannugalu avara maargagala mele ave.
Job 24:23 in English
- King James Version (KJV)
- [Though] it be given him [to be] in safety, whereon he resteth; yet his eyes [are] upon their ways.
- World English Bible (WEB)
- God gives them security, and they rest in it. His eyes are on their ways.
- American Standard Version (ASV)
- [God] giveth them to be in security, and they rest thereon; And his eyes are upon their ways.
- Bible in Basic English (BBE)
- He takes away his fear of danger and gives him support; and his eyes are on his ways.
- Darby Translation (DBY)
- [God] setteth him in safety, and he resteth thereon; but his eyes are upon their ways.
- Webster's Bible (WBS)
- [Though] it is given him [to be] in safety, on which he resteth; yet his eyes [are] upon their ways.
- Young's Literal Translation (YLT)
- He giveth to him confidence, and he is supported, And his eyes [are] on their ways.
Read in context
- 21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
- 22ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
- 23ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
- 24ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- 25ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
Cross references
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Psalm 10:13–14 ಕೀರ್ತನೆಗಳು 10:13–14ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- Proverbs 25:21–23 ಜ್ಞಾನೋಕ್ತಿಗಳು 25:21–23ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು. ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Amos 9:2 ಆಮೋಸ 9:2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- Isaiah 10:8–11 ಯೆಶಾಯ 10:8–11ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- Luke 12:45 ಲೂಕನು 12:45ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
- Psalm 73:3–12 ಕೀರ್ತನೆಗಳು 73:3–12ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
- Psalm 11:4–5 ಕೀರ್ತನೆಗಳು 11:4–5ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ; ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.