Job · chapter 26 · verse 3
Job 26:3 in Kannada
ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
Jnyaanavilladavanige enu aalochane helidi? Iddante iruvadannu neenu bahala vaagi bodhisidiyallaa;
Job 26:3 in English
- King James Version (KJV)
- How hast thou counselled [him that hath] no wisdom? and [how] hast thou plentifully declared the thing as it is?
- World English Bible (WEB)
- How have you counseled him who has no wisdom, and plentifully declared sound knowledge!
- American Standard Version (ASV)
- How hast thou counselled him that hath no wisdom, And plentifully declared sound knowledge!
- Bible in Basic English (BBE)
- How have you given teaching to him who has no wisdom, and fully made clear true knowledge!
- Darby Translation (DBY)
- How hast thou counselled him that hath no wisdom, and abundantly declared the thing as it is!
- Webster's Bible (WBS)
- How hast thou counseled [him that hath] no wisdom? and [how] hast thou abundantly declared the thing as it is?
- Young's Literal Translation (YLT)
- What — thou hast given counsel to the unwise, And wise plans in abundance made known.
Read in context
- 1ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --
- 2ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
- 3ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
- 4ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- 5ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
Cross references
- Job 15:8–10 ಯೋಬನು 15:8–10ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ? ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ? ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- Proverbs 8:6–9 ಜ್ಞಾನೋಕ್ತಿಗಳು 8:6–9ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು. ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ. ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- Psalm 49:1–4 ಕೀರ್ತನೆಗಳು 49:1–4ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ. ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು. ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- Job 17:10 ಯೋಬನು 17:10ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ.
- Job 12:3 ಯೋಬನು 12:3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- Job 38:2 ಯೋಬನು 38:2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
- Job 33:3 ಯೋಬನು 33:3ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Job 13:5 ಯೋಬನು 13:5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- Job 33:33 ಯೋಬನು 33:33ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Job 32:11–13 ಯೋಬನು 32:11–13ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ. ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
- Psalm 71:15–18 ಕೀರ್ತನೆಗಳು 71:15–18ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು. ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು. ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.