Job · chapter 27 · verse 8
Job 27:8 in Kannada
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
Devaru kapatiya praanavannu takkondare avanu laabha maaduvadaralli nireekshe enu?
Job 27:8 in English
- King James Version (KJV)
- For what [is] the hope of the hypocrite, though he hath gained, when God taketh away his soul?
- World English Bible (WEB)
- For what is the hope of the godless, when he is cut off, when God takes away his life?
- American Standard Version (ASV)
- For what is the hope of the godless, though he get him gain, When God taketh away his soul?
- Bible in Basic English (BBE)
- For what is the hope of the sinner when he is cut off, when God takes back his soul?
- Darby Translation (DBY)
- For what is the hope of the ungodly, when [God] cutteth him off, when God taketh away his soul?
- Webster's Bible (WBS)
- For what [is] the hope of the hypocrite, though he hath gained, when God taketh away his soul?
- Young's Literal Translation (YLT)
- For what [is] the hope of the profane, When He doth cut off? When God doth cast off his soul?
Read in context
- 6ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- 7ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
- 8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- 9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
- 10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
Cross references
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Job 8:13 ಯೋಬನು 8:13ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
- Job 11:20 ಯೋಬನು 11:20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Luke 12:20–21 ಲೂಕನು 12:20–21ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Job 31:3 ಯೋಬನು 31:3ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
- James 5:1–3 ಯಾಕೋಬನು 5:1–3ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- Job 15:34 ಯೋಬನು 15:34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Mark 8:36–37 ಮಾರ್ಕನು 8:36–37ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Isaiah 33:14–15 ಯೆಶಾಯ 33:14–15ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು. ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.