Job · chapter 28 · verse 20
Job 28:20 in Kannada
ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
Aadare jnyaanavu ellinda baruvadu? Grahikeya sthalavu elli?
Job 28:20 in English
- King James Version (KJV)
- Whence then cometh wisdom? and where [is] the place of understanding?
- World English Bible (WEB)
- Where then does wisdom come from? Where is the place of understanding?
- American Standard Version (ASV)
- Whence then cometh wisdom? And where is the place of understanding?
- Bible in Basic English (BBE)
- From where then does wisdom come, and where is the resting-place of knowledge?
- Darby Translation (DBY)
- Whence then cometh wisdom? and where is the place of understanding?
- Webster's Bible (WBS)
- Whence then cometh wisdom? and where [is] the place of understanding?
- Young's Literal Translation (YLT)
- And the wisdom — whence doth it come? And where [is] this, the place of understanding?
Read in context
- 18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
- 19ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- 20ಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?
- 21ಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
- 22ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
Cross references
- Job 28:12 ಯೋಬನು 28:12ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Job 28:23 ಯೋಬನು 28:23ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
- Ecclesiastes 7:23–24 ಪ್ರಸಂಗಿ 7:23–24ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು. ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
- 1 Corinthians 2:6–15 1 ಕೊರಿಂಥದವರಿಗೆ 2:6–15ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ. ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು. ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ. ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ. ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ. ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ. ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು. ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.