Job · chapter 29 · verse 16
Job 29:16 in Kannada
ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
Daridrarige naanu tandeyaagiddenu; naanariyadavana vyaajyavannu parishodhisidenu.
Job 29:16 in English
- King James Version (KJV)
- I [was] a father to the poor: and the cause [which] I knew not I searched out.
- World English Bible (WEB)
- I was a father to the needy. I researched the cause of him whom I didn’t know.
- American Standard Version (ASV)
- I was a father to the needy: And the cause of him that I knew not I searched out.
- Bible in Basic English (BBE)
- I was a father to the poor, searching out the cause of him who was strange to me.
- Darby Translation (DBY)
- I was a father to the needy, and the cause which I knew not I searched out;
- Webster's Bible (WBS)
- I [was] a father to the poor: and the cause [which] I knew not I searched out.
- Young's Literal Translation (YLT)
- A father I [am] to the needy, And the cause I have not known I search out.
Read in context
- 14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- 15ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
- 16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- 17ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- 18ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.
Cross references
- Proverbs 29:7 ಜ್ಞಾನೋಕ್ತಿಗಳು 29:7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- Job 24:4 ಯೋಬನು 24:4ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.
- Job 31:18 ಯೋಬನು 31:18(ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
- Proverbs 25:2 ಜ್ಞಾನೋಕ್ತಿಗಳು 25:2ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
- Esther 2:7 ಎಸ್ತೇರಳು 2:7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
- Deuteronomy 13:14 ಧರ್ಮೋಪದೇಶಕಾಂಡ 13:14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
- Deuteronomy 17:8–10 ಧರ್ಮೋಪದೇಶಕಾಂಡ 17:8–10ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
- Exodus 18:26 ವಿಮೋಚನಕಾಂಡ 18:26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 1 Kings 3:16–28 1 ಅರಸುಗಳು 3:16–28ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು. ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ. ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು. ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು. ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು. ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು. ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು. ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು. ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು. ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.