Job · chapter 29 · verse 25
Job 29:25 in Kannada
ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
Avara maargavannu aadukondu pradhaananaagi kootu golaaduvavarannu santaisuvavanaagiye arasanante sainyadalli aaseenanaagiddenu.
Job 29:25 in English
- King James Version (KJV)
- I chose out their way, and sat chief, and dwelt as a king in the army, as one [that] comforteth the mourners.
- World English Bible (WEB)
- I chose out their way, and sat as chief. I lived as a king in the army, as one who comforts the mourners.
- American Standard Version (ASV)
- I chose out their way, and sat [as] chief, And dwelt as a king in the army, As one that comforteth the mourners.
- Bible in Basic English (BBE)
- I took my place as a chief, guiding them on their way, and I was as a king among his army. ...
- Darby Translation (DBY)
- I chose their way, and sat as chief, and dwelt as a king in the army, as one that comforteth mourners.
- Webster's Bible (WBS)
- I chose out their way, and sat chief, and dwelt as a king in the army, as one [that] comforteth the mourners.
- Young's Literal Translation (YLT)
- I choose their way, and sit head, And I dwell as a king in a troop, When mourners he doth comfort.
Read in context
- 23ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
- 24ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- 25ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
Cross references
- 2 Corinthians 1:3–4 2 ಕೊರಿಂಥದವರಿಗೆ 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- 1 Thessalonians 3:2–3 1 ಥೆಸಲೊನೀಕದವರಿಗೆ 3:2–3ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- Genesis 41:40 ಆದಿಕಾಂಡ 41:40ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Judges 11:8 ನ್ಯಾಯಸ್ಥಾಪಕರು 11:8ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
- Genesis 14:14–17 ಆದಿಕಾಂಡ 14:14–17ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು. ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
- Job 31:37 ಯೋಬನು 31:37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- 2 Corinthians 7:5–7 2 ಕೊರಿಂಥದವರಿಗೆ 7:5–7ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು. ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
- 1 Chronicles 13:1–4 1 ಪೂರ್ವಕಾಲವೃತ್ತಾಂತ 13:1–4ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು. ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.