Job · chapter 3 · verse 13
Job 3:13 in Kannada
ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
Haagaagiddare eega maunavaagi malagi kolluttiddenu; vishraantiyalliruttiddenu.
Job 3:13 in English
- King James Version (KJV)
- For now should I have lain still and been quiet, I should have slept: then had I been at rest,
- World English Bible (WEB)
- For now I should have lain down and been quiet. I should have slept, then I would have been at rest,
- American Standard Version (ASV)
- For now should I have lain down and been quiet; I should have slept; then had I been at rest,
- Bible in Basic English (BBE)
- For then I might have gone to my rest in quiet, and in sleep have been in peace,
- Darby Translation (DBY)
- For now should I have lain down and been quiet; I should have slept: then had I been at rest,
- Webster's Bible (WBS)
- For now should I have lain still and been quiet, I should have slept: then had I been at rest,
- Young's Literal Translation (YLT)
- For now, I have lain down, and am quiet, I have slept — then there is rest to me,
Read in context
- 11ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
- 12ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
- 13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- 14ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ
- 15ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
Cross references
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Job 14:10–12 ಯೋಬನು 14:10–12ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು? ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ, ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
- Job 21:13 ಯೋಬನು 21:13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- Job 21:23 ಯೋಬನು 21:23ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
- Ecclesiastes 6:3–5 ಪ್ರಸಂಗಿ 6:3–5ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ. ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು. ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
- Job 7:8–10 ಯೋಬನು 7:8–10ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ. ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- Job 17:13 ಯೋಬನು 17:13ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
- Job 10:22 ಯೋಬನು 10:22ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- Job 19:27 ಯೋಬನು 19:27ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- Job 7:21 ಯೋಬನು 7:21ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.