Job · chapter 31 · verse 6
Job 31:6 in Kannada
ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
Aatanu neetiya traasinalli nannannu toogali; devaru nanna sampoornateyannu tilidukollali.
Job 31:6 in English
- King James Version (KJV)
- Let me be weighed in an even balance, that God may know mine integrity.
- World English Bible (WEB)
- (let me be weighed in an even balance, that God may know my integrity);
- American Standard Version (ASV)
- (Let me be weighed in an even balance, That God may know mine integrity);
- Bible in Basic English (BBE)
- (Let me be measured in upright scales, and let God see my righteousness:)
- Darby Translation (DBY)
- (Let me be weighed in an even balance, and God will take knowledge of my blamelessness;)
- Webster's Bible (WBS)
- Let me be weighed in an even balance, that God may know my integrity.
- Young's Literal Translation (YLT)
- He doth weigh me in righteous balances, And God doth know my integrity.
Read in context
- 4ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
- 5ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ
- 6ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
- 7ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
- 8ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.
Cross references
- Psalm 7:8–9 ಕೀರ್ತನೆಗಳು 7:8–9ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು. ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- Daniel 5:27 ದಾನಿಯೇಲನು 5:27ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Isaiah 26:7 ಯೆಶಾಯ 26:7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
- 1 Samuel 2:3 1 ಸಮುವೇಲನು 2:3ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
- Psalm 17:2–3 ಕೀರ್ತನೆಗಳು 17:2–3ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ. ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
- Job 6:2 ಯೋಬನು 6:2ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.
- Joshua 22:22 ಯೆಹೋಶುವ 22:22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- Psalm 139:23 ಕೀರ್ತನೆಗಳು 139:23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Proverbs 16:11 ಜ್ಞಾನೋಕ್ತಿಗಳು 16:11ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
- Micah 6:11 ಮೀಕ 6:11ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?