Job · chapter 32 · verse 1
Job 32:1 in Kannada
ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
Aaga aa mooru janaru yobanige uttara koduvadannu bittaru; yaakam dare avanu tanna drushtige neetivantanaagiddanu.
Job 32:1 in English
- King James Version (KJV)
- So these three men ceased to answer Job, because he [was] righteous in his own eyes.
- World English Bible (WEB)
- So these three men ceased to answer Job, because he was righteous in his own eyes.
- American Standard Version (ASV)
- So these three men ceased to answer Job, because he was righteous in his own eyes.
- Bible in Basic English (BBE)
- So these three men gave no more answers to Job, because he seemed to himself to be right.
- Darby Translation (DBY)
- And these three men ceased to answer Job, because he was righteous in his own eyes.
- Webster's Bible (WBS)
- So these three men ceased to answer Job, because he [was] righteous in his own eyes.
- Young's Literal Translation (YLT)
- And these three men cease from answering Job, for he [is] righteous in his own eyes,
Read in context
- 1ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
- 2ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
- 3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
Cross references
- Job 33:9 ಯೋಬನು 33:9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
- Job 10:7 ಯೋಬನು 10:7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Job 27:4–6 ಯೋಬನು 27:4–6ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು. ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ. ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- Job 29:11–17 ಯೋಬನು 29:11–17ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Job 23:7 ಯೋಬನು 23:7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 6:29 ಯೋಬನು 6:29ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
- Job 31:1–40 ಯೋಬನು 31:1–40ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ? ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು? ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ? ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ? ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ. ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ, ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ. ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ, ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ. ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು. ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು. ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ, ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು? ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ? ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ, ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ. ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು. ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ, ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ, ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ; ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು. ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ, ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ. ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ? ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು. ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ. ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ? ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ. ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು. ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು. ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.