Job · chapter 34 · verse 30
Job 34:30 in Kannada
ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
Heege janarige uru laagadante kapatiyu aaluvadilla.
Job 34:30 in English
- King James Version (KJV)
- That the hypocrite reign not, lest the people be ensnared.
- World English Bible (WEB)
- that the godless man may not reign, that there be no one to ensnare the people.
- American Standard Version (ASV)
- That the godless man reign not, That there be none to ensnare the people.
- Bible in Basic English (BBE)
- ...
- Darby Translation (DBY)
- That the ungodly man reign not, that the people be not ensnared.
- Webster's Bible (WBS)
- That the hypocrite may not reign, lest the people should be ensnared.
- Young's Literal Translation (YLT)
- From the reigning of a profane man, From the snares of a people;
Read in context
- 28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- 29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- 30ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
- 31ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.
- 32ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
Cross references
- Proverbs 29:2–12 ಜ್ಞಾನೋಕ್ತಿಗಳು 29:2–12ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ. ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ. ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ. ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ. ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ. ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ. ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು. ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ. ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ. ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ. ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- 2 Kings 21:9 2 ಅರಸುಗಳು 21:9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- Hosea 13:11 ಹೋಶೇಯ 13:11ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
- Revelation 13:3–4 ಪ್ರಕಟನೆ 13:3–4ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- 2 Thessalonians 2:4–11 2 ಥೆಸಲೊನೀಕದವರಿಗೆ 2:4–11ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- 1 Kings 12:28–30 1 ಅರಸುಗಳು 12:28–30ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- Revelation 13:11–14 ಪ್ರಕಟನೆ 13:11–14ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ. ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Job 34:21 ಯೋಬನು 34:21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- Psalm 12:8 ಕೀರ್ತನೆಗಳು 12:8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.