Job · chapter 35 · verse 9
Job 35:9 in Kannada
ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
Bahu balaatkaarada deseyinda balaatkaara maadalpattavaru kooguvante avaru maaduttaare; paraakramigala toligoskara moreyiduttaare.
Job 35:9 in English
- King James Version (KJV)
- By reason of the multitude of oppressions they make [the oppressed] to cry: they cry out by reason of the arm of the mighty.
- World English Bible (WEB)
- “By reason of the multitude of oppressions they cry out. They cry for help by reason of the arm of the mighty.
- American Standard Version (ASV)
- By reason of the multitude of oppressions they cry out; They cry for help by reason of the arm of the mighty.
- Bible in Basic English (BBE)
- Because the hand of the cruel is hard on them, men are making sounds of grief; they are crying out for help because of the arm of the strong.
- Darby Translation (DBY)
- By reason of the multitude of oppressions they cry; they cry out by reason of the arm of the mighty:
- Webster's Bible (WBS)
- By reason of the multitude of oppressions they make [the oppressed] to cry: they cry out by reason of the arm of the mighty.
- Young's Literal Translation (YLT)
- Because of the multitude of oppressions They cause to cry out, They cry because of the arm of the mighty.
Read in context
- 7ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
- 8ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
- 9ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
- 10ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
- 11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
Cross references
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- Job 34:28 ಯೋಬನು 34:28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- Job 12:19 ಯೋಬನು 12:19ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
- Nehemiah 5:1–5 ನೆಹೆಮೀಯ 5:1–5ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Psalm 56:1–2 ಕೀರ್ತನೆಗಳು 56:1–2ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- Psalm 43:2 ಕೀರ್ತನೆಗಳು 43:2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Exodus 3:9 ವಿಮೋಚನಕಾಂಡ 3:9ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Psalm 55:2–3 ಕೀರ್ತನೆಗಳು 55:2–3ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
- Job 24:12 ಯೋಬನು 24:12ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Luke 18:3–7 ಲೂಕನು 18:3–7ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು. ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?