Skip to content
ThuthiThuthiThuthi
Job · chapter 36 of 42 · 33 verses

Job 36 in Kannada

ಯೋಬನು 36

  1. ಎಲೀಹು ಮುಂದುವರಿದು ಹೇಳಿದ್ದೇನಂದರೆ--

    Elihu also proceeded, and said,

  2. ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.

    Suffer me a little, and I will shew thee that [I have] yet to speak on God’s behalf.

  3. ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು.

    I will fetch my knowledge from afar, and will ascribe righteousness to my Maker.

  4. ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.

    For truly my words [shall] not [be] false: he that is perfect in knowledge [is] with thee.

  5. ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.

    Behold, God [is] mighty, and despiseth not [any: he is] mighty in strength [and] wisdom.

  6. ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.

    He preserveth not the life of the wicked: but giveth right to the poor.

  7. ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.

    He withdraweth not his eyes from the righteous: but with kings [are they] on the throne; yea, he doth establish them for ever, and they are exalted.

  8. ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.

    And if [they be] bound in fetters, [and] be holden in cords of affliction;

  9. ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.

    Then he sheweth them their work, and their transgressions that they have exceeded.

  10. ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.

    He openeth also their ear to discipline, and commandeth that they return from iniquity.

  11. ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.

    If they obey and serve [him], they shall spend their days in prosperity, and their years in pleasures.

  12. ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.

    But if they obey not, they shall perish by the sword, and they shall die without knowledge.

  13. ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.

    But the hypocrites in heart heap up wrath: they cry not when he bindeth them.

  14. ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.

    They die in youth, and their life [is] among the unclean.

  15. ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.

    He delivereth the poor in his affliction, and openeth their ears in oppression.

  16. ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.

    Even so would he have removed thee out of the strait [into] a broad place, where [there is] no straitness; and that which should be set on thy table [should be] full of fatness.

  17. ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.

    But thou hast fulfilled the judgment of the wicked: judgment and justice take hold [on thee].

  18. ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.

    Because [there is] wrath, [beware] lest he take thee away with [his] stroke: then a great ransom cannot deliver thee.

  19. ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.

    Will he esteem thy riches? [no], not gold, nor all the forces of strength.

  20. ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.

    Desire not the night, when people are cut off in their place.

  21. ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.

    Take heed, regard not iniquity: for this hast thou chosen rather than affliction.

  22. ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?

    Behold, God exalteth by his power: who teacheth like him?

  23. ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?

    Who hath enjoined him his way? or who can say, Thou hast wrought iniquity?

  24. ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.

    Remember that thou magnify his work, which men behold.

  25. ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.

    Every man may see it; man may behold [it] afar off.

  26. ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.

    Behold, God [is] great, and we know [him] not, neither can the number of his years be searched out.

  27. ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.

    For he maketh small the drops of water: they pour down rain according to the vapour thereof:

  28. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.

    Which the clouds do drop [and] distil upon man abundantly.

  29. ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?

    Also can [any] understand the spreadings of the clouds, [or] the noise of his tabernacle?

  30. ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.

    Behold, he spreadeth his light upon it, and covereth the bottom of the sea.

  31. ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.

    For by them judgeth he the people; he giveth meat in abundance.

  32. ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.

    With clouds he covereth the light; and commandeth it [not to shine] by [the cloud] that cometh betwixt.

  33. ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.

    The noise thereof sheweth concerning it, the cattle also concerning the vapour.

All chapters of Job · Kannada Bible · Job 36 in Tamil

Kannada Bible: Kannada Old Version, public domain.

King James Version: public domain.