Job · chapter 36 · verse 10
Job 36:10 in Kannada
ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
Aatanu avara kiviyannu shikshegaagi teredu dushtatana bittu tirugirendu avarige aajnyaapisuttaane.
Job 36:10 in English
- King James Version (KJV)
- He openeth also their ear to discipline, and commandeth that they return from iniquity.
- World English Bible (WEB)
- He also opens their ears to instruction, and commands that they return from iniquity.
- American Standard Version (ASV)
- He openeth also their ear to instruction, And commandeth that they return from iniquity.
- Bible in Basic English (BBE)
- Their ear is open to his teaching, and he gives them orders so that their hearts may be turned from evil.
- Darby Translation (DBY)
- And he openeth their ear to discipline, and commandeth that they return from iniquity.
- Webster's Bible (WBS)
- He openeth also their ear to discipline, and commandeth that they return from iniquity.
- Young's Literal Translation (YLT)
- And He uncovereth their ear for instruction, And saith that they turn back from iniquity.
Read in context
- 8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
- 9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- 10ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
- 11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
- 12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
Cross references
- Job 36:15 ಯೋಬನು 36:15ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
- Matthew 3:8 ಮತ್ತಾಯನು 3:8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Isaiah 1:16–20 ಯೆಶಾಯ 1:16–20ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Proverbs 8:4–5 ಜ್ಞಾನೋಕ್ತಿಗಳು 8:4–5ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ. ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Isaiah 50:5 ಯೆಶಾಯ 50:5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
- 2 Kings 17:13 2 ಅರಸುಗಳು 17:13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
- Job 33:16–23 ಯೋಬನು 33:16–23ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ. ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ. ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ. ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
- Proverbs 9:4–6 ಜ್ಞಾನೋಕ್ತಿಗಳು 9:4–6ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- Ezekiel 18:30–31 ಯೆಹೆಜ್ಕೇಲನು 18:30–31ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.