Job · chapter 36 · verse 12
Job 36:12 in Kannada
ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
Avaru vidheyaraagadiddare kattiyinda naashavaaguvaru; tiliyade saayuvaru.
Job 36:12 in English
- King James Version (KJV)
- But if they obey not, they shall perish by the sword, and they shall die without knowledge.
- World English Bible (WEB)
- But if they don’t listen, they will perish by the sword; they will die without knowledge.
- American Standard Version (ASV)
- But if they hearken not, they shall perish by the sword, And they shall die without knowledge.
- Bible in Basic English (BBE)
- But if not, they come to their end, and give up their breath without knowledge.
- Darby Translation (DBY)
- But if they hearken not, they shall pass away by the sword, and expire without knowledge.
- Webster's Bible (WBS)
- But if they obey not, they shall perish by the sword, and they shall die without knowledge.
- Young's Literal Translation (YLT)
- And if they do not hearken, By the dart they pass away, And expire without knowledge.
Read in context
- 10ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.
- 11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
- 12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- 13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- 14ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.
Cross references
- Job 4:21 ಯೋಬನು 4:21ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Deuteronomy 18:15–22 ಧರ್ಮೋಪದೇಶಕಾಂಡ 18:15–22ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.-- ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ. ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ. ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು. ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು. ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು. ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
- Deuteronomy 29:15–20 ಧರ್ಮೋಪದೇಶಕಾಂಡ 29:15–20ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ. ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ? ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ? ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
- John 8:21–24 ಯೋಹಾನನು 8:21–24ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು. ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು. ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Job 15:22 ಯೋಬನು 15:22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.