Job · chapter 37 · verse 13
Job 37:13 in Kannada
ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
Shikshegaagali avana bhoomigaagali karu negaagali aatanu adannu baramaaduttaane.
Job 37:13 in English
- King James Version (KJV)
- He causeth it to come, whether for correction, or for his land, or for mercy.
- World English Bible (WEB)
- whether it is for correction, or for his land, or for loving kindness, that he causes it to come.
- American Standard Version (ASV)
- Whether it be for correction, or for his land, Or for lovingkindness, that he cause it to come.
- Bible in Basic English (BBE)
- For a rod, or for a curse, or for mercy, causing it to come on the mark.
- Darby Translation (DBY)
- Whether he cause it to come as a rod, or for his land, or in mercy.
- Webster's Bible (WBS)
- He causeth it to come, whether for correction, or for his land, or for mercy.
- Young's Literal Translation (YLT)
- Whether for a rod, or for His land, Or for kindness — He doth cause it to come.
Read in context
- 11ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
- 12ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
- 13ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
- 14ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ.
- 15ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
Cross references
- 1 Kings 18:45 1 ಅರಸುಗಳು 18:45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Job 38:26–27 ಯೋಬನು 38:26–27ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
- 1 Samuel 12:18–19 1 ಸಮುವೇಲನು 12:18–19ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು. ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
- Job 36:31 ಯೋಬನು 36:31ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
- Ezra 10:9 ಎಜ್ರನು 10:9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
- Exodus 9:18–25 ವಿಮೋಚನಕಾಂಡ 9:18–25ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ. ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು. ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Job 37:6 ಯೋಬನು 37:6ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ
- 2 Samuel 21:10 2 ಸಮುವೇಲನು 21:10ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
- Job 38:37–38 ಯೋಬನು 38:37–38ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ; ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
- 2 Samuel 21:14 2 ಸಮುವೇಲನು 21:14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.