Job · chapter 37 · verse 14
Job 37:14 in Kannada
ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ.
O yobane, idakke kivigodu, mauna vaagi nintu devara adbhutagalannu grahisiko.
Job 37:14 in English
- King James Version (KJV)
- Hearken unto this, O Job: stand still, and consider the wondrous works of God.
- World English Bible (WEB)
- “Listen to this, Job. Stand still, and consider the wondrous works of God.
- American Standard Version (ASV)
- Hearken unto this, O Job: Stand still, and consider the wondrous works of God.
- Bible in Basic English (BBE)
- Give ear to this, O Job, and keep quiet in your place; and take note of the wonders worked by God.
- Darby Translation (DBY)
- Hearken unto this, Job; stand still and discern the wondrous works of God.
- Webster's Bible (WBS)
- Hearken to this, O Job: stand still, and consider the wondrous works of God.
- Young's Literal Translation (YLT)
- Hear this, O Job, Stand and consider the wonders of God.
Read in context
- 12ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
- 13ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
- 14ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ.
- 15ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
- 16ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
Cross references
- Psalm 145:10–12 ಕೀರ್ತನೆಗಳು 145:10–12ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
- Psalm 111:2 ಕೀರ್ತನೆಗಳು 111:2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Job 36:24 ಯೋಬನು 36:24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
- Psalm 145:5–6 ಕೀರ್ತನೆಗಳು 145:5–6ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Job 26:6–14 ಯೋಬನು 26:6–14ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ. ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ. ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು; ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ. ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ. ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ. ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ. ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು. ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.