Job · chapter 37 · verse 22
Job 37:22 in Kannada
ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
Uttaradinda uttama havaamaana baruttade; devara baliyalli bhayankaravaada ghana untu.
Job 37:22 in English
- King James Version (KJV)
- Fair weather cometh out of the north: with God [is] terrible majesty.
- World English Bible (WEB)
- Out of the north comes golden splendor. With God is awesome majesty.
- American Standard Version (ASV)
- Out of the north cometh golden splendor: God hath upon him terrible majesty.
- Bible in Basic English (BBE)
- A bright light comes out of the north; God's glory is greatly to be feared.
- Darby Translation (DBY)
- From the north cometh gold; with God is terrible majesty.
- Webster's Bible (WBS)
- Fair weather cometh from the north: with God [is] terrible majesty.
- Young's Literal Translation (YLT)
- From the golden north it cometh, Beside God [is] fearful honour.
Read in context
- 20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
- 21ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.
- 22ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.
- 23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- 24ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
Cross references
- Psalm 104:1 ಕೀರ್ತನೆಗಳು 104:1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Habakkuk 3:3–19 ಹಬಕ್ಕೂಕ 3:3–19ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು. ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ. ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ. ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು. ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ. ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು. ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Job 40:10 ಯೋಬನು 40:10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Proverbs 25:23 ಜ್ಞಾನೋಕ್ತಿಗಳು 25:23ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Nahum 1:3 ನಹೂಮ 1:3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- Psalm 76:12 ಕೀರ್ತನೆಗಳು 76:12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Micah 5:4 ಮೀಕ 5:4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.