Job · chapter 40 · verse 11
Job 40:11 in Kannada
ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
Ninna kopada uri yannu doorahaaku. Garvishtarannellaa noditaggisu.
Job 40:11 in English
- King James Version (KJV)
- Cast abroad the rage of thy wrath: and behold every one [that is] proud, and abase him.
- World English Bible (WEB)
- Pour out the fury of your anger. Look at everyone who is proud, and bring him low.
- American Standard Version (ASV)
- Pour forth the overflowings of thine anger; And look upon every one that is proud, and abase him.
- Bible in Basic English (BBE)
- Let your wrath be overflowing; let your eyes see all the sons of pride, and make them low.
- Darby Translation (DBY)
- Cast abroad the ragings of thine anger, and look on every one that is proud, and abase him:
- Webster's Bible (WBS)
- Cast abroad the rage of thy wrath: and behold every one [that is] proud, and abase him.
- Young's Literal Translation (YLT)
- Scatter abroad the wrath of thine anger, And see every proud one, and make him low.
Read in context
- 9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- 10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- 11ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
- 12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- 13ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
Cross references
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Isaiah 2:11–12 ಯೆಶಾಯ 2:11–12ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Isaiah 42:25 ಯೆಶಾಯ 42:25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
- Psalm 78:49–50 ಕೀರ್ತನೆಗಳು 78:49–50ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Acts 12:22–23 ಅಪೊಸ್ತಲರ ಕೃತ್ಯಗಳು 12:22–23ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Job 27:22 ಯೋಬನು 27:22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Isaiah 10:12–19 ಯೆಶಾಯ 10:12–19ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Daniel 5:20–23 ದಾನಿಯೇಲನು 5:20–23ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.