Job · chapter 40 · verse 8
Job 40:8 in Kannada
ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
Neenu nanna nyaayateervikeyannu tegeduhaakuviyo? Neenu neetivanta naaguva haage nannannu khandisuviyo?
Job 40:8 in English
- King James Version (KJV)
- Wilt thou also disannul my judgment? wilt thou condemn me, that thou mayest be righteous?
- World English Bible (WEB)
- Will you even annul my judgment? Will you condemn me, that you may be justified?
- American Standard Version (ASV)
- Wilt thou even annul my judgment? Wilt thou condemn me, that thou mayest be justified?
- Bible in Basic English (BBE)
- Will you even make my right of no value? will you say that I am wrong in order to make clear that you are right?
- Darby Translation (DBY)
- Wilt thou also annul my judgment? wilt thou condemn me that thou mayest be righteous?
- Webster's Bible (WBS)
- Wilt thou also disannul my judgment? wilt thou condemn me, that thou mayest be righteous?
- Young's Literal Translation (YLT)
- Dost thou also make void My judgment? Dost thou condemn Me, That thou mayest be righteous?
Read in context
- 6ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು--
- 7ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
- 8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- 9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- 10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
Cross references
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Isaiah 28:18 ಯೆಶಾಯ 28:18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
- Job 32:2 ಯೋಬನು 32:2ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
- Job 34:5–6 ಯೋಬನು 34:5–6ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು. ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.
- Isaiah 14:27 ಯೆಶಾಯ 14:27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- Job 27:2–6 ಯೋಬನು 27:2–6ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು. ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ. ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
- Job 35:2–3 ಯೋಬನು 35:2–3ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ? ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
- Hebrews 7:18 ಇಬ್ರಿಯರಿಗೆ 7:18ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.