Job · chapter 42 · verse 2
Job 42:2 in Kannada
ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
Ninage ellaa saadhyavaagide; ninage yaava aalochaneyoo tadeyalpaduvadillavendu tilididdene.
Job 42:2 in English
- King James Version (KJV)
- I know that thou canst do every [thing], and [that] no thought can be withholden from thee.
- World English Bible (WEB)
- “I know that you can do all things, and that no purpose of yours can be restrained.
- American Standard Version (ASV)
- I know that thou canst do all things, And that no purpose of thine can be restrained.
- Bible in Basic English (BBE)
- I see that you are able to do every thing, and to give effect to all your designs.
- Darby Translation (DBY)
- I know that thou canst do everything, and that thou canst be hindered in no thought of thine.
- Webster's Bible (WBS)
- I know that thou canst do every [thing] , and [that] no thought can be withheld from thee.
- Young's Literal Translation (YLT)
- Thou hast known that [for] all things Thou art able, And not withheld from Thee is [any] device:
Read in context
- 1ಯೋಬನು ಕರ್ತನಿಗೆ ಉತ್ತರಕೊಟ್ಟು--
- 2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
- 3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- 4ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.
Cross references
- Matthew 19:26 ಮತ್ತಾಯನು 19:26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Mark 10:27 ಮಾರ್ಕನು 10:27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Job 23:13 ಯೋಬನು 23:13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- Isaiah 14:27 ಯೆಶಾಯ 14:27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Isaiah 43:13 ಯೆಶಾಯ 43:13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?