Job · chapter 42 · verse 6
Job 42:6 in Kannada
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
Aadadarinda nannannu asahyisikondu dooliya lliyoo boodiyalliyoo pashchaattaapa paduttene andanu.
Job 42:6 in English
- King James Version (KJV)
- Wherefore I abhor [myself], and repent in dust and ashes.
- World English Bible (WEB)
- Therefore I abhor myself, and repent in dust and ashes.”
- American Standard Version (ASV)
- Wherefore I abhor [myself], And repent in dust and ashes.
- Bible in Basic English (BBE)
- For this cause I give witness that what I said is false, and in sorrow I take my seat in the dust.
- Darby Translation (DBY)
- Wherefore I abhor [myself], and repent in dust and ashes.
- Webster's Bible (WBS)
- Wherefore I abhor [myself] , and repent in dust and ashes.
- Young's Literal Translation (YLT)
- Therefore do I loathe [it], And I have repented on dust and ashes.
Read in context
- 4ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.
- 5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
- 6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- 7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- 8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
Cross references
- Ezra 9:6 ಎಜ್ರನು 9:6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- 1 Timothy 1:13–16 1 ತಿಮೊಥೆಯನಿಗೆ 1:13–16ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- James 4:7–10 ಯಾಕೋಬನು 4:7–10ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Job 40:3–4 ಯೋಬನು 40:3–4ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು-- ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Job 30:19 ಯೋಬನು 30:19ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- Daniel 9:3 ದಾನಿಯೇಲನು 9:3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Jonah 3:6–10 ಯೋನ 3:6–10ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- 1 Corinthians 15:8–9 1 ಕೊರಿಂಥದವರಿಗೆ 15:8–9ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- Esther 4:1–3 ಎಸ್ತೇರಳು 4:1–3ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
- Luke 10:13 ಲೂಕನು 10:13ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.