Job · chapter 5 · verse 3
Job 5:3 in Kannada
ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
Moodhanu berooruvadannu naanu nodidenu; sangadale avana sthaanavannu naanu shapisidenu.
Job 5:3 in English
- King James Version (KJV)
- I have seen the foolish taking root: but suddenly I cursed his habitation.
- World English Bible (WEB)
- I have seen the foolish taking root, but suddenly I cursed his habitation.
- American Standard Version (ASV)
- I have seen the foolish taking root: But suddenly I cursed his habitation.
- Bible in Basic English (BBE)
- I have seen the foolish taking root, but suddenly the curse came on his house.
- Darby Translation (DBY)
- I myself saw the foolish taking root, but suddenly I cursed his habitation.
- Webster's Bible (WBS)
- I have seen the foolish taking root: but suddenly I cursed his habitation.
- Young's Literal Translation (YLT)
- I — I have seen the perverse taking root, And I mark his habitation straightway,
Read in context
- 1ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
- 2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- 3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
- 4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- 5ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
Cross references
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- Deuteronomy 27:15–26 ಧರ್ಮೋಪದೇಶಕಾಂಡ 27:15–26ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- Acts 1:20 ಅಪೊಸ್ತಲರ ಕೃತ್ಯಗಳು 1:20ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- Jeremiah 12:1–3 ಯೆರೆಮೀಯ 12:1–3ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ. ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
- Job 24:18 ಯೋಬನು 24:18ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- Psalm 69:25 ಕೀರ್ತನೆಗಳು 69:25ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Psalm 73:3–9 ಕೀರ್ತನೆಗಳು 73:3–9ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.