Job · chapter 5 · verse 8
Job 5:8 in Kannada
ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
Naanu devarannu hudukuvenu; nanna kaaryavannu devara mele haakuvenu.
Job 5:8 in English
- King James Version (KJV)
- I would seek unto God, and unto God would I commit my cause:
- World English Bible (WEB)
- “But as for me, I would seek God. I would commit my cause to God,
- American Standard Version (ASV)
- But as for me, I would seek unto God, And unto God would I commit my cause;
- Bible in Basic English (BBE)
- But as for me, I would make my prayer to God, and I would put my cause before him:
- Darby Translation (DBY)
- But as for me I will seek unto God, and unto God commit my cause;
- Webster's Bible (WBS)
- I would seek to God, and to God would I commit my cause:
- Young's Literal Translation (YLT)
- Yet I — I inquire for God, And for God I give my word,
Read in context
- 6ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
- 7ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
- 8ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
- 9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- 10ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
Cross references
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Job 22:21 ಯೋಬನು 22:21ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
- Psalm 37:5 ಕೀರ್ತನೆಗಳು 37:5ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
- 2 Chronicles 33:12–13 2 ಪೂರ್ವಕಾಲವೃತ್ತಾಂತ 33:12–13ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Job 22:27 ಯೋಬನು 22:27ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Job 8:5 ಯೋಬನು 8:5ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ
- Genesis 32:7–12 ಆದಿಕಾಂಡ 32:7–12ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು. ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು. ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ, ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು. ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Psalm 77:1–2 ಕೀರ್ತನೆಗಳು 77:1–2ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು. ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- Jonah 2:1–7 ಯೋನ 2:1–7ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು. ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು. ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು. ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ. ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.