Job · chapter 6 · verse 9
Job 6:9 in Kannada
ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
Naanu naashavaaguvadu devarige mechchikeyaaguvadaadare tanna kaichaachi nannannu saayisidare olledu.
Job 6:9 in English
- King James Version (KJV)
- Even that it would please God to destroy me; that he would let loose his hand, and cut me off!
- World English Bible (WEB)
- even that it would please God to crush me; that he would let loose his hand, and cut me off!
- American Standard Version (ASV)
- Even that it would please God to crush me; That he would let loose his hand, and cut me off!
- Bible in Basic English (BBE)
- If only he would be pleased to put an end to me; and would let loose his hand, so that I might be cut off!
- Darby Translation (DBY)
- And that it would please God to crush me, that he would let loose his hand and cut me off!
- Webster's Bible (WBS)
- Even that it would please God to destroy me; that he would let loose his hand, and cut me off!
- Young's Literal Translation (YLT)
- That God would please — and bruise me, Loose His hand and cut me off!
Read in context
- 7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
- 8ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು.
- 9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- 10ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
- 11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
Cross references
- 1 Kings 19:4 1 ಅರಸುಗಳು 19:4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Isaiah 48:10–13 ಯೆಶಾಯ 48:10–13ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ. ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು. ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- Numbers 11:14–15 ಅರಣ್ಯಕಾಂಡ 11:14–15ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ. ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- Revelation 9:6 ಪ್ರಕಟನೆ 9:6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
- Job 14:13 ಯೋಬನು 14:13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- Job 19:21 ಯೋಬನು 19:21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
- Psalm 32:4 ಕೀರ್ತನೆಗಳು 32:4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.