Job · chapter 7 · verse 18
Job 7:18 in Kannada
ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
Avanannu prati udayadalli darshisuva haageyoo kshana kshanakke avanannu pareekshisuva haageyoo manushyanu eshtaravanu?
Job 7:18 in English
- King James Version (KJV)
- And [that] thou shouldest visit him every morning, [and] try him every moment?
- World English Bible (WEB)
- that you should visit him every morning, and test him every moment?
- American Standard Version (ASV)
- And that thou shouldest visit him every morning, And try him every moment?
- Bible in Basic English (BBE)
- And that your hand is on him every morning, and that you are testing him every minute?
- Darby Translation (DBY)
- And that thou visitest him every morning, triest him every moment?
- Webster's Bible (WBS)
- And [that] thou shouldst visit him every morning, [and] try him every moment?
- Young's Literal Translation (YLT)
- And inspectest him in the mornings, In the evenings dost try him?
Read in context
- 16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- 17ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
- 18ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
- 19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
- 20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Cross references
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Jeremiah 9:7 ಯೆರೆಮೀಯ 9:7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- Isaiah 38:12–13 ಯೆಶಾಯ 38:12–13ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ. ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Isaiah 26:14 ಯೆಶಾಯ 26:14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Job 14:3 ಯೋಬನು 14:3ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
- Deuteronomy 8:16 ಧರ್ಮೋಪದೇಶಕಾಂಡ 8:16ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
- Genesis 22:1 ಆದಿಕಾಂಡ 22:1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- Daniel 12:10 ದಾನಿಯೇಲನು 12:10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- Exodus 32:34 ವಿಮೋಚನಕಾಂಡ 32:34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.