Job · chapter 8 · verse 3
Job 8:3 in Kannada
ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
Devaru anyaayavaada teerpumaaduttaano? Sarvashaktanu neetige viruddhavaadaddannu maadu vano?
Job 8:3 in English
- King James Version (KJV)
- Doth God pervert judgment? or doth the Almighty pervert justice?
- World English Bible (WEB)
- Does God pervert justice? Or does the Almighty pervert righteousness?
- American Standard Version (ASV)
- Doth God pervert justice? Or doth the Almighty pervert righteousness?
- Bible in Basic English (BBE)
- Does God give wrong decisions? or is the Ruler of all not upright in his judging?
- Darby Translation (DBY)
- Doth God pervert judgment, and the Almighty pervert justice?
- Webster's Bible (WBS)
- Doth God pervert judgment; or doth the Almighty pervert justice?
- Young's Literal Translation (YLT)
- Doth God pervert judgment? And doth the Mighty One pervert justice?
Read in context
- 1ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--
- 2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
- 3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- 4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
- 5ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ
Cross references
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Job 34:10–12 ಯೋಬನು 34:10–12ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ. ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ. ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- Daniel 9:14 ದಾನಿಯೇಲನು 9:14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Ezekiel 33:20 ಯೆಹೆಜ್ಕೇಲನು 33:20ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
- Romans 3:4–6 ರೋಮಾಪುರದವರಿಗೆ 3:4–6ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ. ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Ezekiel 18:25 ಯೆಹೆಜ್ಕೇಲನು 18:25ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Job 40:8 ಯೋಬನು 40:8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- Ezekiel 33:17 ಯೆಹೆಜ್ಕೇಲನು 33:17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.