Job · chapter 8 · verse 4
Job 8:4 in Kannada
ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
Ninna makkalu aatanige virodhavaagi paapamaadiddare, avara drohada deseyinda avarannu tallibiduvanu.
Job 8:4 in English
- King James Version (KJV)
- If thy children have sinned against him, and he have cast them away for their transgression;
- World English Bible (WEB)
- If your children have sinned against him, he has delivered them into the hand of their disobedience.
- American Standard Version (ASV)
- If thy children have sinned against him, And he hath delivered them into the hand of their transgression;
- Bible in Basic English (BBE)
- If your children have done evil against him, then their punishment is from his hand.
- Darby Translation (DBY)
- If thy children have sinned against him, he hath also given them over into the hand of their transgression.
- Webster's Bible (WBS)
- If thy children have sinned against him, and he hath cast them away for their transgression;
- Young's Literal Translation (YLT)
- If thy sons have sinned before Him, And He doth send them away, By the hand of their transgression,
Read in context
- 2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
- 3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- 4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
- 5ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ
- 6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
Cross references
- Job 1:5 ಯೋಬನು 1:5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- Job 1:18–19 ಯೋಬನು 1:18–19ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
- Job 18:16–19 ಯೋಬನು 18:16–19ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- Genesis 19:13–25 ಆದಿಕಾಂಡ 19:13–25ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು; ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು. ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ, ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು; ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು. ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ. ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು. ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು. ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.