Job · chapter 9 · verse 23
Job 9:23 in Kannada
ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
Koradeyu phakkane kondare, niraparaadhigala pareekshege avanu geli maaduttaane.
Job 9:23 in English
- King James Version (KJV)
- If the scourge slay suddenly, he will laugh at the trial of the innocent.
- World English Bible (WEB)
- If the scourge kills suddenly, he will mock at the trial of the innocent.
- American Standard Version (ASV)
- If the scourge slay suddenly, He will mock at the trial of the innocent.
- Bible in Basic English (BBE)
- If death comes suddenly through disease, he makes sport of the fate of those who have done no wrong.
- Darby Translation (DBY)
- If the scourge kill suddenly, he mocketh at the trial of the innocent.
- Webster's Bible (WBS)
- If the scourge shall slay suddenly, he will laugh at the trial of the innocent.
- Young's Literal Translation (YLT)
- If a scourge doth put to death suddenly, At the trial of the innocent He laugheth.
Read in context
- 21ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.
- 22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- 23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
- 24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- 25ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
Cross references
- Job 24:12 ಯೋಬನು 24:12ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
- Job 1:13–19 ಯೋಬನು 1:13–19ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 4:7 ಯೋಬನು 4:7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
- 2 Samuel 14:15 2 ಸಮುವೇಲನು 14:15ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.
- Hebrews 11:36–37 ಇಬ್ರಿಯರಿಗೆ 11:36–37ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
- Psalm 44:22 ಕೀರ್ತನೆಗಳು 44:22ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Ezekiel 21:13 ಯೆಹೆಜ್ಕೇಲನು 21:13ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
- Job 8:20 ಯೋಬನು 8:20ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
- 2 Samuel 14:17 2 ಸಮುವೇಲನು 14:17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
- Ezekiel 14:19–21 ಯೆಹೆಜ್ಕೇಲನು 14:19–21ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ, ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?