Job · chapter 9 · verse 24
Job 9:24 in Kannada
ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
Lokavu kettavana kaiyalli kodalpattide. Adara nyaayaadhipatigala mukhaga lannu aatanu muchchuttaane. Illavaadare aatanu elliruttiddano? Yaaraagiruttiddano?
Job 9:24 in English
- King James Version (KJV)
- The earth is given into the hand of the wicked: he covereth the faces of the judges thereof; if not, where, [and] who [is] he?
- World English Bible (WEB)
- The earth is given into the hand of the wicked. He covers the faces of its judges. If not he, then who is it?
- American Standard Version (ASV)
- The earth is given into the hand of the wicked; He covereth the faces of the judges thereof: If [it be] not [he], who then is it?
- Bible in Basic English (BBE)
- The land is given into the power of the evil-doer; the faces of its judges are covered; if not by him, then who has done it?
- Darby Translation (DBY)
- The earth is given over into the hand of the wicked [man]; he covereth the faces of its judges. If not, who then is it?
- Webster's Bible (WBS)
- The earth is given into the hand of the wicked: he covereth the faces of its judges; if not, where, [and] who [is] he?
- Young's Literal Translation (YLT)
- Earth hath been given Into the hand of the wicked one. The face of its judges he covereth, If not — where, who [is] he?
Read in context
- 22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- 23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
- 24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- 25ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
- 26ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
Cross references
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Psalm 73:3–7 ಕೀರ್ತನೆಗಳು 73:3–7ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- Jeremiah 12:1–2 ಯೆರೆಮೀಯ 12:1–2ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- 2 Samuel 15:30 2 ಸಮುವೇಲನು 15:30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- Job 21:7–15 ಯೋಬನು 21:7–15ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Esther 7:8 ಎಸ್ತೇರಳು 7:8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
- Job 12:17 ಯೋಬನು 12:17ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
- Daniel 5:18–21 ದಾನಿಯೇಲನು 5:18–21ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
- 2 Samuel 19:4 2 ಸಮುವೇಲನು 19:4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
- Habakkuk 1:14–17 ಹಬಕ್ಕೂಕ 1:14–17ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ? ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ. ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ? ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Job 16:11 ಯೋಬನು 16:11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
- Daniel 4:17 ದಾನಿಯೇಲನು 4:17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.