Job · chapter 9 · verse 29
Job 9:29 in Kannada
ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
Naanu kettavanaagiddare yaake ee vyarthavaada prayaasa?
Job 9:29 in English
- King James Version (KJV)
- [If] I be wicked, why then labour I in vain?
- World English Bible (WEB)
- I will be condemned. Why then do I labor in vain?
- American Standard Version (ASV)
- I shall be condemned; Why then do I labor in vain?
- Bible in Basic English (BBE)
- You will not let me be clear of sin! why then do I take trouble for nothing?
- Darby Translation (DBY)
- Be it that I am wicked, why then do I labour in vain?
- Webster's Bible (WBS)
- [If] I am wicked, why then do I labor in vain?
- Young's Literal Translation (YLT)
- I — I am become wicked; why [is] this? [In] vain I labour.
Read in context
- 27ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
- 28ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
- 29ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
- 30ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
- 31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
Cross references
- Job 10:7 ಯೋಬನು 10:7ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
- Psalm 37:33 ಕೀರ್ತನೆಗಳು 37:33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Job 10:14–17 ಯೋಬನು 10:14–17ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ. ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು. ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ. ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
- Job 21:16–17 ಯೋಬನು 21:16–17ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ. ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
- Jeremiah 2:35 ಯೆರೆಮೀಯ 2:35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
- Psalm 73:13 ಕೀರ್ತನೆಗಳು 73:13ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- Job 9:22 ಯೋಬನು 9:22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- Job 22:5–30 ಯೋಬನು 22:5–30ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ. ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ. ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ. ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ. ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ. ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ. ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು. ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ. ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು. ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ. ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು. ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ. ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ. ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು. ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು. ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- Job 21:27 ಯೋಬನು 21:27ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.