Job · chapter 9 · verse 7
Job 9:7 in Kannada
ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
Udayisada haage sooryanige appanekoduttaane; nakshatragalige mudrehaakuttaane;
Job 9:7 in English
- King James Version (KJV)
- Which commandeth the sun, and it riseth not; and sealeth up the stars.
- World English Bible (WEB)
- He commands the sun and it doesn’t rise, and seals up the stars.
- American Standard Version (ASV)
- That commandeth the sun, and it riseth not, And sealeth up the stars;
- Bible in Basic English (BBE)
- Who gives orders to the sun, and it does not give its light; and who keeps the stars from shining.
- Darby Translation (DBY)
- Who commandeth the sun, and it riseth not, and he sealeth up the stars;
- Webster's Bible (WBS)
- Who commandeth the sun, and it riseth not; and sealeth up the stars.
- Young's Literal Translation (YLT)
- Who is speaking to the sun, and it riseth not, And the stars He sealeth up.
Read in context
- 5ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
- 6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- 7ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;
- 8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- 9ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
Cross references
- Isaiah 13:10 ಯೆಶಾಯ 13:10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
- Luke 21:25–26 ಲೂಕನು 21:25–26ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- Ezekiel 32:7–8 ಯೆಹೆಜ್ಕೇಲನು 32:7–8ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Job 38:19–20 ಯೋಬನು 38:19–20ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ? ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?
- Amos 4:13 ಆಮೋಸ 4:13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Job 37:7 ಯೋಬನು 37:7ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
- Exodus 10:21–22 ವಿಮೋಚನಕಾಂಡ 10:21–22ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು. ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.
- Joshua 10:12 ಯೆಹೋಶುವ 10:12ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Job 38:12–15 ಯೋಬನು 38:12–15ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ? ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ. ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.