Joel · chapter 1 · verse 16
Joel 1:16 in Kannada
ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
Namma kannugala munde aahaaravoo namma devara aalayadinda santo shavoo ullaasavoo tegeyalpattiveyallavo?
Joel 1:16 in English
- King James Version (KJV)
- Is not the meat cut off before our eyes, [yea], joy and gladness from the house of our God?
- World English Bible (WEB)
- Isn’t the food cut off before our eyes, joy and gladness from the house of our God?
- American Standard Version (ASV)
- Is not the food cut off before our eyes, [yea], joy and gladness from the house of our God?
- Bible in Basic English (BBE)
- Is not food cut off before our eyes? joy and delight from the house of our God?
- Darby Translation (DBY)
- Is not the food cut off before our eyes, joy and gladness from the house of our God?
- Webster's Bible (WBS)
- Is not the food cut off before our eyes, [and] joy and gladness from the house of our God?
- Young's Literal Translation (YLT)
- Is not before our eyes food cut off? From the house of our God joy and rejoicing?
Read in context
- 14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- 15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- 16ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
- 17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
- 18ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
Cross references
- Psalm 105:3 ಕೀರ್ತನೆಗಳು 105:3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- Psalm 43:4 ಕೀರ್ತನೆಗಳು 43:4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Deuteronomy 12:6–7 ಧರ್ಮೋಪದೇಶಕಾಂಡ 12:6–7ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Deuteronomy 12:11–12 ಧರ್ಮೋಪದೇಶಕಾಂಡ 12:11–12ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 16:10–15 ಧರ್ಮೋಪದೇಶಕಾಂಡ 16:10–15ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು. ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು. ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು. ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು. ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Isaiah 3:7 ಯೆಶಾಯ 3:7ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು.
- Amos 4:6–7 ಆಮೋಸ 4:6–7ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ. ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- Isaiah 62:8–9 ಯೆಶಾಯ 62:8–9ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ; ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
- Joel 1:5–9 ಯೋವೇಲ 1:5–9ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು. ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು. ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.