Joel · chapter 1 · verse 3
Joel 1:3 in Kannada
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
Idara vishayavannu nimma makkalige tilisiri, nimma makkalu tamma makkaligoo avara makkalu mattondu talaantarakkoo tilisali.
Joel 1:3 in English
- King James Version (KJV)
- Tell ye your children of it, and [let] your children [tell] their children, and their children another generation.
- World English Bible (WEB)
- Tell your children about it, and have your children tell their children, and their children, another generation.
- American Standard Version (ASV)
- Tell ye your children of it, and [let] your children [tell] their children, and their children another generation.
- Bible in Basic English (BBE)
- Give the story of it to your children, and let them give it to their children, and their children to another generation.
- Darby Translation (DBY)
- Tell your children of it, and [let] your children [tell] their children, and their children another generation:
- Webster's Bible (WBS)
- Tell ye your children of it, and [let] your children [tell] their children, and their children another generation.
- Young's Literal Translation (YLT)
- Concerning it to your sons talk ye, And your sons to their sons, And their sons to another generation.
Read in context
- 1ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು.
- 2ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
- 3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
- 4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
- 5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
Cross references
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 145:4 ಕೀರ್ತನೆಗಳು 145:4ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
- Exodus 13:14 ವಿಮೋಚನಕಾಂಡ 13:14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
- Psalm 78:3–8 ಕೀರ್ತನೆಗಳು 78:3–8ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Exodus 10:1–2 ವಿಮೋಚನಕಾಂಡ 10:1–2ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
- Psalm 44:1 ಕೀರ್ತನೆಗಳು 44:1ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
- Joshua 4:21–22 ಯೆಹೋಶುವ 4:21–22ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
- Joshua 4:6–7 ಯೆಹೋಶುವ 4:6–7ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.